ಪುದುಚೇರಿ ಕರಾವಳಿಗೆ ಶನಿವಾರ ಅಪ್ಪಳಿಸಿದ್ದ ‘ಫೆಗಲ್'' ಚಂಡಮಾರುತ ಭಾನುವಾರ ದುರ್ಬಲಗೊಂಡಿದ್ದರೂ ಭಾರೀ ಮಳೆಯಿಂದಾಗಿ ಈ ಪುಟ್ಟ ಕೇಂದ್ರಾಡಳಿತ ಪ್ರದೇಶ ಹಾಗೂ ನೆರೆಯ ತಮಿಳುನಾಡಿನ ಹಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ
ಈ ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಚನೆಯಾಗಿದ್ದ ಆಂಧ್ರ ವಕ್ಫ್ ಬೋರ್ಡ್ದ ಆಡಳಿತ ಮಂಡಳಿಯನ್ನು ಬಿಜೆಪಿ ಮೈತ್ರಿಕೂಟದ ಭಾಗವಾಗಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರ ಇದೀಗ ವಿಸರ್ಜನೆ ಮಾಡಿದೆ.
ಮುಂಬೈನ ಮಹಿಳೆಯೊಬ್ಬರಿಗೆ ವಿಡಿಯೋ ಕಾಲ್ ಮಾಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ನಿಮ್ಮ ಹೆಸರು ಬೆಳಕಿಗೆ ಬಂದಿದೆ ಎಂದು ಹೇಳಿ ₹1.7 ಲಕ್ಷ ರು. ಪೀಕಿ, ಆಕೆಯನ್ನು ಬೆತ್ತಲೆ ವಿಡಿಯೋ ಶೂಟ್ ಮಾಡಿದ ಘಟನೆ ನಡೆದಿದೆ.
‘1999ರಲ್ಲಿ ಅಂತರ್ ಸಂಸದೀಯ ಒಕ್ಕೂಟದ (ಐಪಿಯು) ಅಧ್ಯಕ್ಷೆಯಾಗಿ ಆಯ್ಕೆಯಾದ ವಿಚಾರವನ್ನು ತಿಳಿಸಲು ಬರ್ಲಿನ್ನಿಂದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಫೋನ್ ಮಾಡಿದ್ದೆ. ಆದರೆ ಅವರ ಸಿಬ್ಬಂದಿ ಮೇಡಂ ಬ್ಯುಸಿ ಇದ್ದಾರೆ ಎಂದು ಹೇಳಿ ಒಂದು ಗಂಟೆ ಕಾಯಿಸಿದ್ದರು