ಸಾಮಾಜಿಕ ಜಾಲತಾಣ ನಿಷೇಧದ ವಿರುದ್ಧ ಆರಂಭವಾದ ಪ್ರತಿಭಟನೆಯು ನೇಪಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಅಲ್ಲಿನ ಪೊಲೀಸರೇ ಆಸ್ಪತ್ರೆ, ಶಾಲೆಗೆ ನುಗ್ಗಿ ಗುಂಡಿನ ಮಳೆಗರೆದಿದ್ದಾರೆ, ಮನೆಗಳಿಗೆ ನುಗ್ಗಿ ಅತ್ಯಾ*ರವೆಸಗಿದ್ದಾರೆ ಎಂದು ಅಲ್ಲಿನ ಸಾಮಾಜಿಕ ಜಾಲತಾಣದ ಪ್ರಭಾವಿಗಳು ಆರೋಪಿಸಿದ್ದಾರೆ.
ಹೊಸ ತಲೆಮಾರಿನ ಯುವಜನ(ಜನ್ ಝೀ) ದಂಗೆಯಿಂದಾಗಿ ರಾಜೀನಾಮೆ ನೀಡಿರುವ ನೆರೆಯ ನೇಪಾಳದ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಅವರ ಸ್ಥಾನಕ್ಕೆ ಕರ್ನಾಟಕದ ವಿಶ್ವೇಶ್ವರಯ್ಯ ವಿವಿಯ ಎಂಟೆಕ್ ಪದವೀಧರ, ರ್ಯಾಪರ್ ಬಲೇಂದ್ರ ಶಾ ಹೆಸರು ಗಟ್ಟಿಯಾಗಿ ಕೇಳಿಸುತ್ತಿದೆ.
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಸಿ. ಪಿ. ರಾಧಾಕೃಷ್ಣನ್ ಅವರು 452 ಮತಗಳನ್ನು ಗಳಿಸಿ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ಹಮಾಸ್ನ ಉಗ್ರ ನಾಯಕರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ. ಆದರೆ ಸಾವುನೋವಿನ ಮಾಹಿತಿ ಲಭಿಸಿಲ್ಲ. ದಾಳಿಯನ್ನು ಕತಾರ್ ಖಂಡಿಸಿದ್ದು. ‘ಹಮಾಸ್ ಪ್ರಧಾನ ಕಚೇರಿಯ ಮೇಲೆ ಇಸ್ರೇಲ್ ನಡೆಸಿರುವುದು ಹೇಡಿತನದ ದಾಳಿ. ಇದು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆ’ ಎಂದು ಕಿಡಿಕಾರಿದೆ.
ರಾಹುಲ್ ಗಾಂಧಿ ಅವರೊಬ್ಬ ಬ್ರಿಟಿಷ್ ಪ್ರಜೆ’ ಎಂದು ಅಲಹಾಬಾದ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿರುವ ಕರ್ನಾಟಕ ಬಿಜೆಪಿ ಕಾರ್ಯಕರ್ತ ಎಸ್.ವಿಘ್ನೇಶ್ ಶಿಶಿರ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಮಂಗಳವಾರ ವಿಚಾರಣೆ ನಡೆಸಿದೆ. ಈ ವೇಳೆ ರಾಹುಲ್ರ ವಿದೇಶಿ ವಹಿವಾಟಿನ ಬಗ್ಗೆ ಮಾಹಿತಿ ಪಡೆದಿದೆ.