ಪಾಕಿಸ್ತಾನದ ಜೈಲಿನಲ್ಲಿರುವ ಕುಲಭೂಷಣ್ ಜಾಧವ್ ಅವರನ್ನು ಇರಾನಿನಿಂದ ಅಪಹರಿಸಲು ಪಾಕಿಸ್ತಾನಿ ಗುಪ್ತಚರ ಸಂಸ್ಥೆ ಐಎಸ್ಐಗೆ ನೆರವಾಗಿದ್ದ ಹಾಗೂ ಪಾಕ್ ‘ವಿದ್ವಾಂಸನೂ’ ಆಗಿರುವ ಉಗ್ರ ಮುಫ್ತಿ ಷಾ ಮಿರ್ನನ್ನು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ಕಾಂಗ್ರೆಸ್ನಲ್ಲೇ ಇದ್ದು ಬಿಜೆಪಿ ಪರ ಕೆಲಸ ಮಾಡುವ ನಾಯಕರು, ಕಾರ್ಯಕರ್ತರನ್ನು ಗುರುತಿಸಿ ಪ್ರತ್ಯೇಕಿಸುವ ಅಗತ್ಯವಿದೆ ಎಂದು ಹೇಳಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, ಅಂಥವರ ವಿರುದ್ಧ ಪಕ್ಷದಿಂದಲೇ ಉಚ್ಚಾಟಿಸುವಂಥ ಕಠಿಣ ಕ್ರಮಕ್ಕೂ ಹೇಸಲ್ಲ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರು ಮೂಲದ ಸ್ಟಾರ್ಟ್ಅಪ್ ದಿಗಂತರ ಕಂಪನಿಯು ವಿಶ್ವದ ಮೊದಲ ಬಾಹ್ಯಾಕಾಶ ಕಣ್ಗಾವಲು (ಸರ್ವೇಕ್ಷಣಾ) ಉಪಗ್ರಹವನ್ನು ನಿಯೋಜಿಸಿದ್ದು, ಅದು ಶನಿವಾರದಿಂದ ಕಾರ್ಯನಿರ್ವಹಿಸಲು ಆರಂಭಿಸಿದೆ
ದೆಹಲಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಮಹಿಳೆಯರಿಗೆ ಮಾಸಿಕ 2500 ರು. ನೆರವು ನೀಡುವ ಮಹಿಳಾ ಸಮೃದ್ಧಿ ಯೋಜನೆಗಾಗಿ 5100 ಕೋಟಿ ರು. ಅನುದಾನ ಮೀಸಲಿಡಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ.