ಸಾಕಷ್ಟು ಗ್ಯಾರಂಟಿಗಳನ್ನು ನೀಡಿ ಆರ್ಥಿಕ ಸಂಕಷ್ಟದಲ್ಲಿರುವ ಹಿಮಾಚಲ ಪ್ರದೇಶ ಕಾಂಗ್ರೆಸ್ ಸರ್ಕಾರ, ‘ಮುಜರಾಯಿ ಇಲಾಖೆ ಅಡಿ ಬರುವ ದೇವಾಲಯಗಳು ಸರ್ಕಾರದ 2 ಯೋಜನೆಗಳಿಗೆ ದೇಣಿಗೆ ನೀಡಬಹುದು’ ಎಂದು ಕೋರಿಕೆ ಸಲ್ಲಿಸಿದೆ.
ಸದ್ಗುರು ಅವರ ಈಶ ಫೌಂಡೇಶನ್ ವಿರುದ್ಧ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ನೋಟಿಸ್ ಅನ್ನು ರದ್ದುಪಡಿಸಿದ್ದ ಮದ್ರಾಸ್ ಹೈಕೋರ್ಟ್ ತೀರ್ಪಿನ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಉತ್ತರಾಖಂಡದ ಪ್ರಸಿದ್ಧ ಯಾತ್ರಾಸ್ಥಳ ಬದರಿನಾಥದಿಂದ 3 ಕಿ.ಮೀ. ದೂರದಲ್ಲಿರುವ ಚಮೋಲಿ ಜಿಲ್ಲೆಯ ಮಾಣಾ ಎಂಬಲ್ಲಿ ಶುಕ್ರವಾರ ಭಾರೀ ಹಿಮಕುಸಿತ ಸಂಭವಿಸಿದೆ. ಹಿಮ ತೆರವು ಕೆಲಸಕ್ಕೆ ನಿಯೋಜಿಸಲಾಗಿದ್ದ 57 ಕಾರ್ಮಿಕರು ಅದರಡಿ ಸಿಲುಕಿದ್ದು, ಅವರಲ್ಲಿ ಈಗಾಗಲೇ 32 ಮಂದಿಯನ್ನು ರಕ್ಷಿಸಲಾಗಿದೆ.