ಕರ್ನಾಟಕದ ಸಿದ್ದರಾಮಯ್ಯ ಸರ್ಕಾರದ ಮದ್ಯದ ದುಡ್ಡು ಮಹಾರಾಷ್ಟ್ರ ಎಲೆಕ್ಷನ್ಗೆ : ಮೋದಿಕರ್ನಾಟಕದ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಮಹಾರಾಷ್ಟ್ರ ಚುನಾವಣೆಗಾಗಿ ಕರ್ನಾಟಕದ ಮದ್ಯ ಮಾರಾಟಗಾರರಿಂದ 700 ಕೋಟಿ ರು. ಲೂಟಿ ಮಾಡಲಾಗಿದೆ. ಈ ಹಣವನ್ನು ಮಹಾರಾಷ್ಟ್ರ ಚುನಾವಣೆಗೆ ಬಳಸಲಾಗುತ್ತಿದೆ’ ಎಂದಿದ್ದಾರೆ.