250 ಜನರನ್ನು ಬಲಿ ಪಡೆದ ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಗುರುವಾರ ಸಂಜೆ ರಾಷ್ಟ್ರಪತಿ ಆಳ್ವಿಕೆ ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದ 4 ದಿನ ತರುವಾಯ ಈ ಘೋಷಣೆ ಹೊರಬಿದ್ದಿದೆ.
ಚುನಾವಣೆ ಗೆಲ್ಲಲು ರಾಜಕೀಯ ಪಕ್ಷಗಳು ಇತ್ತೀಚಿನ ದಿನಗಳಲ್ಲಿ ಪ್ರಮುಖ ಅಸ್ತ್ರವಾಗಿ ಬಳಕೆ ಮಾಡುತ್ತಿರುವ ಉಚಿತ ಕೊಡುಗೆಗಳ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಇಂಥ ಯೋಜನೆಗಳಿಂದಾಗಿ ಜನರಿಗೆ ಕೆಲಸ ಮಾಡಲು ಮನಸ್ಸೇ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದೆ.
1984ರಲ್ಲಿ ನಡೆದ ಸಿಖ್ ವಿರೋಧಿ ದಂಗೆ ವೇಳೆ ಸರಸ್ವತಿ ವಿಹಾರ್ ಪ್ರದೇಶದಲ್ಲಿ ನಡೆದ ಇಬ್ಬರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಬುಧವಾರ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.
ಮಹಾರಾಷ್ಟ್ರದಲ್ಲಿ ಎನ್ಡಿಎ ಸರ್ಕಾರ ರಚನೆಗೊಂಡರೂ ಎರಡೂ ಮೈತ್ರಿಕೂಟದಲ್ಲಿನ ಒಳಏಟು, ಒಳಪೆಟ್ಟು ನಿಂತಿಲ್ಲ. ಡಿಸಿಎಂ ಶಿಂಧೆಗೆ ಸಿಎಂ ಫಡ್ನವೀಸ್ ಟಾಂಗ್ ಕೊಟ್ಟಿದ್ದರೆ, ಉದ್ಧವ್ ಬಣಕ್ಕೆ ಶರದ್ ಪವಾರ್ ಚಿವುಟಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.