ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಘೋಷಿಸುವ ಉಚಿತ ಕೊಡುಗೆಗಳ ವಿರುದ್ಧ ಸ್ವತಃ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರೇ ಹೈಕೋರ್ಟ್ ಮೆಟ್ಟಿಲೇರಿರುವ ಅಚ್ಚರಿಯ ಘಟನೆ ದೆಹಲಿಯಲ್ಲಿ ನಡೆದಿದೆ.
ಎಲ್ ಆ್ಯಂಡ್ ಟಿ ಸಂಸ್ಥೆಯ ಸಿಇಒ ಸುಬ್ರಹ್ಮಣ್ಯನ್, ‘ಸರ್ಕಾರದ ಕಲ್ಯಾಣ ಯೋಜನೆಗಳಿಂದಾಗಿ ಕಾರ್ಮಿಕರು ಊರು ಬಿಟ್ಟು ಸ್ಥಳಾಂತರಗೊಳ್ಳಲು ಹಿಂಜರಿಯುತ್ತಿದ್ದಾರೆ. ಇದರಿಂದಾಗಿ ಮೂಲಸೌಕರ್ಯ ಯೋಜನೆ ಕಾಮಗಾರಿಗಳಿಗೆ ಅಡ್ಡಿಯಾಗುತ್ತಿದೆ’ ಎಂದು ಹೇಳಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ 5 ವರ್ಷ ಬಳಿಕ ರೆಪೋದರವನ್ನು ಶೇ.0.25ರಷ್ಟು ಇಳಿಕೆ ಮಾಡಿದ ಬೆನ್ನಲ್ಲೇ 7 ಬ್ಯಾಂಕುಗಳು ತಮ್ಮ ಸಾಲದ ಮೇಲಿನ ಬಡ್ಡಿದರವನ್ನು ಶೇ.0.15ರಿಂದ ಶೇ.0.25ರಷ್ಟು ಇಳಿಸಿವೆ.
ಕೇರಳದ ಕೊಟ್ಟಾಯಂನಲ್ಲಿರುವ ಸರ್ಕಾರಿ ನರ್ಸಿಂಗ್ ಕಾಲೇಜ್ನಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಮೊದಲ ವರ್ಷದ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್ ಹೆಸರಲ್ಲಿ ಕಳೆದ ಮೂರು ತಿಂಗಳಿಂದ ನಡೆಯುತ್ತಿರುವ ಅಮಾನವೀಯ ವರ್ತನೆ.