ಸಂಸತ್ತಿನ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಮಾಡಿದ ಭಾಷಣವನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೀಡಿದ ‘ಬಡಪಾಯಿ ಮಹಿಳೆ’ ಎಂಬ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.
ಹೈಕೋರ್ಟ್ಗಳ ನಿವೃತ್ತ ನ್ಯಾಯಾಧೀಶರನ್ನು ಮರಳಿ ಹೈಕೋರ್ಟ್ಗಳಿಗೆ ನೇಮಕ ಮಾಡಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
ದೆಹಲಿಯತ್ತ ಹರಿಯುವ ಯಮುನಾ ನದಿಗೆ ಹರ್ಯಾಣದ ಬಿಜೆಪಿ ಸರ್ಕಾರ ವಿಷ ಬೆರೆಸಿ ನರಮೇಧ ನಡೆಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ 2ನೇ ನೋಟಿಸ್ಗೆ ಸ್ವತಃ ಆಯೋಗದ ಕಚೇರಿಗೆ ತೆರಳಿ ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಉತ್ತರ ನೀಡಿದ್ದಾರೆ.
ಖಲಿಸ್ತಾನಿ ಸಂಘಟನೆ ಸಿಖ್ ಫಾರ್ ಜಸ್ಟೀಸ್, ದೇಶದ ಮುಸಲ್ಮಾನರು, ತಮಿಳರು ಹಾಗೂ ಮಣಿಪುರದ ಕ್ರೈಸ್ತರಿಗೆ ಭಾರತದಿಂದ ಬೇರ್ಪಡುವಂತೆ ಪ್ರಚೋದಿಸುತ್ತಿದೆ 3 ಎಂದು ಗುಪ್ತಚರ ಸಂಸ್ಥೆಗಳು ಕೇಂದ್ರಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ.
ಪ್ರಧಾನಿ ಮೋದಿ ಸರ್ಕಾರದ ಮೂರನೇ ಅವಧಿಯು ಈ ಹಿಂದಿನ ಆಡಳಿತಕ್ಕಿಂತ ವೇಗವಾಗಿ ಕೆಲಸ ಮಾಡುತ್ತಿದ್ದು, ತ್ವರಿತಗತಿಯಲ್ಲಿ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.