ಹರ್ಯಾಣದಲ್ಲಿ ಬಿಜೆಪಿಗೆ ಜಿಲೇಬಿದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆ ಮೀರಿ ದಾಖಲೆಯ 3ನೇ ಬಾರಿಗೆ ಅಧಿಕಾರಕ್ಕೇರುವ ಮೂಲಕ ‘ಜಯದ ಜಿಲೇಬಿ’ ಸವಿದಿದೆ. ಇನ್ನು ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿ ಈ ಸಲ ಸರ್ವಾಧಿಕ 29 ಸ್ಥಾನ ಗೆದ್ದಿದೆಯಾದರೂ, ಕಾಶ್ಮೀರ ಭಾಗದಲ್ಲಿ ಉತ್ತಮ ಸ್ಥಾನ ಗಳಿಸಲು ವಿಫಲವಾಗಿದೆ.