ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸಂಬಂಧಿಸಿದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ಗೆ ಸೇರಿದ 700 ಕೋಟಿ ರು.ಗಳಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯ (ಇ.ಡಿ.) ಪ್ರಕ್ರಿಯೆ ಪ್ರಾರಂಭಿಸಿದೆ.
ವಾರಾಣಸಿಗೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಶುಕ್ರವಾರ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಕ್ಷೇತ್ರದಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ವಿಮಾನದ ನಿಲ್ದಾಣದಲ್ಲಿಯೇ ಮಾಹಿತಿ ಪಡೆದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರತಿ ತೆರಿಗೆಗೆ ಹೆದರಿ ಕಳೆದ ವಾರ ಭಾರತದಿಂದ 6 ವಿಮಾನಗಳಲ್ಲಿ ಅಮೆರಿಕಕ್ಕೆ ಹೋಗಿದ್ದ ಐಫೋನ್ ತೂಕ ಬರೋಬ್ಬರಿ 600 ಟನ್ ಎಂಬುದು ಗೊತ್ತಾಗಿದೆ.
ಉಗ್ರ ತಹಾವುರ್ ರಾಣಾ ಭಾರತಕ್ಕೆ ಗಡೀಪಾರಾದ ಬೆನ್ನಲ್ಲೇ, 2011ರಲ್ಲಿ ಮೋದಿ ಮಾಡಿದ್ದ ಟ್ವೀಟ್ ಒಂದು ಇದೀಗ ವೈರಲ್ ಆಗುತ್ತಿದೆ.