ಪ್ರಧಾನಿ ನರೇಂದ್ರ ಮೋದಿ ಶಿವಲಿಂಗದ ಮೇಲಿನ ಚೇಳು ಇದ್ದಂತೆ ಎಂದು ಆರೆಸ್ಸೆಸ್ ನಾಯಕರೊಬ್ಬರು ಹೇಳಿದ್ದರು’ ಎಂದು 2018ರಲ್ಲಿ ಹೇಳಿ ವಿವಾದ ಎಬ್ಬಿಸಿದ್ದ ಕಾಂಗ್ರೆಸ್ ಮುಖಂಡ ಶಶಿ ತರೂರ್ ವಿರುದ್ಧದ ಮಾನಹಾನಿ ದಾವೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಲಿರುವ ಕುಸ್ತಿ ಪಟು ವಿನೇಶ್ ಪೋಗಟ್ರನ್ನು ಸೋಲಿಸಲು ಬಿಜೆಪಿ ಕ್ರೀಡಾ ಘಟಕದ ಸಹ ಸಂಚಾಲಕರನ್ನು ಕಣಕ್ಕಿಳಿಸಿದೆ.
ಜಿಎನ್ಎಸ್ಎಸ್ ಅಳವಡಿಸಿಕೊಂಡ ಖಾಸಗಿ ವಾಹನಗಳಿಗೆ ಹೆದ್ದಾರಿ ಮತ್ತು ಎಕ್ಸ್ಪ್ರೆಸ್ವೇಗಳಲ್ಲಿ 20 ಕಿ.ಮೀವರೆಗಿನ ಪ್ರಯಾಣಕ್ಕೆ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ನಿಯಮದನ್ವಯ, 20 ಕಿ.ಮೀ ದಾಟಿದ ನಂತರ ವಾಹನವು ಪ್ರಯಾಣಿಸಿದ ದೂರಕ್ಕೆ ಮಾತ್ರ ಶುಲ್ಕ ವಿಧಿಸಲಾಗುತ್ತದೆ.
‘ಮಲಯಾಳಂ ಚಿತ್ರರಂಗದಲ್ಲಿ ನಡೆದಿದೆ ಎನ್ನಲಾದ ಸೆಕ್ಸ್ ಹಗರಣದ ಕುರಿತು ನ್ಯಾ.ಹೇಮಾ ಸಮಿತಿ ವರದಿ ನೀಡಿ 4 ವರ್ಷವಾದರೂ ಕ್ರಮಕೈಗೊಂಡಿರಲಿಲ್ಲ ಏಕೆ?’ ಎಂದು ಕೇರಳದ ಎಡರಂಗ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದೆ.