ಚಿನ್ನದ ಬೆಲೆ 10 ಗ್ರಾಂಗೆ ₹1.14 ಲಕ್ಷ : ದಾಖಲೆದೇಶದಲ್ಲಿ ಮತ್ತೆ ಚಿನ್ನದ ಬೆಲೆಯು ಏರಿಕೆಯಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ 99.5 ಶುದ್ಧತೆಯ ಚಿನ್ನದ ಬೆಲೆಯು 2400 ರು. ಏರಿಕೆಯಾಗಿ, 10 ಗ್ರಾಂಗೆ 1,14,800 ರು.ಗೆ ತಲುಪಿದೆ. ಇದು ಸಾರ್ವಕಾಲಿಕ ದಾಖಲೆ. ಜೊತೆಗೆ ಬೆಳ್ಳಿ ಬೆಲೆಯು 2500 ರು. ಏರಿಕೆಯಾಗಿ ಕೇಜಿಗೆ ದಾಖಲೆಯ 1,32,700 ರು.ಗೆ ಜಿಗಿದಿದೆ.