ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಶುಕ್ರವಾರ ಬೆಳಗ್ಗೆ ಬಂಧಿಸಿದ್ದು ಸಂಜೆ ವೇಳೆಗೆ ಅವರಿಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ 4 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಬಿಡುಗಡೆ ಹೊಂದಿದ್ದಾರೆ.
‘ಸಂವಿಧಾನವು ಆರ್ಎಸ್ಎಸ್ನ ನಿಯಮಗಳ ಪುಸ್ತಕವಲ್ಲ ಎಂಬುದನ್ನು ಪ್ರಧಾನಿ ಅರ್ಥ ಮಾಡಿಕೊಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದಿದ್ದರೆ ಸಂವಿಧಾನವನ್ನು ಬದಲಿಸುವ ಕೆಲಸದಲ್ಲಿ ತೊಡಗಿರುತ್ತಿತ್ತು’ ಎಂದು ಪ್ರಿಯಾಂಕಾ ಗಾಂಧಿ ಆಡಳಿತ ಪಕ್ಷದ ವಿರುದ್ಧ ಟೀಕಾಪ್ರಹಾರ ಮಾಡಿದ್ದಾರೆ.
2023ರ ಕರ್ನಾಟಕ ಚುನಾವಣೆ ವೇಳೆ ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎನ್ನಲಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ದೆಹಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಜಾಗೊಳಿಸಿದೆ.
ಜೀವನಾಂಶಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಸದ್ದು ಮಾಡುತ್ತಿರುವ ನಡುವೆಯೇ, ಜೀವನಾಂಶದ ಮೊತ್ತವನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ 8 ಅಂಶಗಳನ್ನು ರೂಪಿಸಿದೆ,