ಹರ್ಯಾಣದ ಶಂಭು ಗಡಿಯಲ್ಲಿ ರೈತ ಪ್ರತಿಭಟನೆಗೆ 200 ದಿನ : ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಬೆಂಬಲಹರ್ಯಾಣದ ಶಂಭು ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಗೆ ಶನಿವಾರ 200 ದಿನ ತುಂಬಿದ್ದು, ಈ ಸಂದರ್ಭದಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಕೇಂದ್ರ ಸರ್ಕಾರ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕೆಂದು ಅವರು ಒತ್ತಾಯಿಸಿದರು.