ಹಿಂಸಾಚಾರಕ್ಕೆ ಸಿಲುಕಿರುವ ಜನಾಂಗೀಯ ಸಂಘರ್ಷಪೀಡಿತ ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯನ್ನು ಪುನಾಸ್ಥಾಪಿಸಲು ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಭದ್ರತಾ ಪಡೆಗಳಿಗೂ ಕೇಂದ್ರ ಗೃಹ ಸಚಿವಾಲಯ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ವಾರ್ಡ್ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಕ್ಕಳು ಸಾವಿಗೀಡಾದ ಬೆನ್ನಲ್ಲೇ, ಗಾಯಗೊಂಡಿರುವ 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿವೆ.
ಉತ್ತರ ಭಾರತದಲ್ಲಿ ದಿನದಿಂದ ದಿನಕ್ಕೆ ವಾಯು ಗುಣಮಟ್ಟ ವಿಷಮ ಸ್ಥಿತಿಗೆ ತಲುಪುತ್ತಿದ್ದು, ದಿಲ್ಲಿ ಹಾಗೂ ಹರ್ಯಾಣದಲ್ಲಿ ಶುಕ್ರವಾರದ ಸ್ಥಿತಿಯೇ ಮುಂದುವರಿದಿದೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್ಡಿಎ ಸರ್ಕಾರ ಮತ ಬ್ಯಾಂಕ್ ರಾಜಕಾರಣದಿಂದ ಸಾವಿರಾರು ಮೈಲು ದೂರದಲ್ಲಿದೆ. ‘ಜನರಿಂದ, ಜನರಿಗಾಗಿ, ಜನರಿಗೋಸ್ಕರ ಅಭಿವೃದ್ಧಿ’ ಎಂಬ ಮಂತ್ರದೊಂದಿಗೆ ನಮ್ಮ ಸರ್ಕಾರ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.