ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಸಿಬಿಐ ತನಿಖೆ ಶುರು ಕಳೆದ ವಾರ ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಬುಧವಾರ ಆರಂಭಿಸಿದೆ. ಕಾಲೇಜಿಗೆ ವಿಧಿವಿಜ್ಞಾನ ತಂಡ, ಬೆರಳಚ್ಚು ತಜ್ಞರೊಂದಿಗೆ ಆಗಮಿಸಿರುವ ಅದು ಆರೋಪಿಗಳ ಉಪಸ್ಥಿತಿ ಬಗ್ಗೆ ಎಲ್ಲ ಸಾಕ್ಷ್ಯ ಸಂಗ್ರಹಿಸಿದೆ.