ಗೌತಮ್ ಅದಾನಿ ಒಡೆತನದ ಅದಾನಿ ಸಮೂಹಕ್ಕೆ ಸೇರಿದ ಬೇನಾಮಿ ವಿದೇಶಿ ಕಂಪನಿಗಳಲ್ಲಿ ಭಾರತೀಯ ಷೇರುಪೇಟೆ ನಿಯಂತ್ರಕ ಮಂಡಳಿ (ಸೆಬಿ) ಮುಖ್ಯಸ್ಥೆಯ ಹೂಡಿಕೆಯಿದೆ’ ಎಂದು ಅಮೆರಿಕದ ಖಾಸಗಿ ಸಂಶೋಧನಾ ಸಂಸ್ಥೆ ‘ಹಿಂಡನ್ಬರ್ಗ್ ರೀಸರ್ಚ್’ ಆರೋಪ ಮಾಡಿದ ಬೆನ್ನಲ್ಲೇ ಮತ್ತೊಮ್ಮೆ ವಿವಾದ ಭುಗಿಲೆದ್ದಿದೆ.
ಅರವಿಂದ ಕೇಜ್ರಿವಾಲ್ ಅಬಕಾರಿ ಹಗರಣದಲ್ಲಿ ಜೈಲು ಸೇರಿರುವ ಕಾರಣ, ಇದೇ ಹಗರಣದಲ್ಲಿ ಬಂಧಿತರಾಗಿ ಈಗಷ್ಟೇ ಜೈಲಿನಿಂದ ಹೊರಬಂದಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ದೆಹಲಿ ಮತ್ತು ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರ ನೇತೃತ್ವ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.