ಸರ್ಕಾರ ಎಲ್ಲಾ ಖಾಸಗಿ ಆಸ್ತಿ ವಶಕ್ಕೆ ಪಡೆವಂತಿಲ್ಲ‘ಸಮುದಾಯದ ಒಳಿತಿನ ಹೆಸರಲ್ಲಿ, ಸರ್ಕಾರಗಳು ಯಾವುದೇ ಖಾಸಗಿ ಆಸ್ತಿಯನ್ನು ಸಂವಿಧಾನದ ನಿಯಮಗಳ ಹೆಸರಿನಲ್ಲಿ ಏಕಪಕ್ಷೀಯವಾಗಿ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ಹೀಗೆ ವಶಪಡಿಸಿಕೊಳ್ಳಲು ಉದ್ದೇಶಿಸಿರುವ ಆಸ್ತಿಯು ಕೆಲವೊಂದು ಮಾನದಂಡಗಳನ್ನು ಪೂರೈಸಿದರಷ್ಟೇ ಅದು ಸಮುದಾಯದ ಭೌತಿಕ ಸಂಪನ್ಮೂಲ ಎಂದು ಪರಿಗಣಿಸಲ್ಪಡುತ್ತದೆ. ಅಂಥ ಸಂದರ್ಭದಲ್ಲಿ ಮಾತ್ರ ಸರ್ಕಾರಗಳು ಖಾಸಗಿ ಆಸ್ತಿ ವಶಪಡಿಸಿಕೊಳ್ಳಬಹುದು’ ಎಂದು ಸುಪ್ರೀಂಕೋರ್ಟ್ನ ಸಾಂವಿಧಾನಿಕ ಪೀಠ 7:2 ಬಹುಮತದಿಂದ ಐತಿಹಾಸಿಕ ತೀರ್ಪು ನೀಡಿದೆ.