ಮತ್ತೆ ಗೋವು ತಲೆ ಕತ್ತರಿಸಿ ದುಷ್ಕರ್ಮಿಗಳಿಂದ ವಿಕೃತಿ - ನೆಲಮಂಗಲ ತಾಲೂಕಿನ ಅರಳಸಂದ್ರದಲ್ಲಿ ಕೃತ್ಯರಾಜ್ಯದ ವಿವಿಧೆಡೆ ಹಸುಗಳ ಹತ್ಯೆ, ಕತ್ತು ಕೊಯ್ಯುವುದು, ಕೆಚ್ಚಲು ಕತ್ತರಿಸುವಂಥ ಅಮಾನುಷ ಕೃತ್ಯಗಳು ಮುಂದುವರಿದಿದ್ದು, ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ಎರಡು ಹಳ್ಳಿಕಾರ್ ನಾಟಿ ಹೋರಿಗಳ ಕತ್ತು ಕೊಯ್ದಿರುವ ದುಷ್ಕೃತ್ಯ ಬೆಳಕಿಗೆ ಬಂದಿದೆ.