ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಇಲ್ಲಿನ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿ ಆಗಿದೆ. ಇದನ್ನು ತಪ್ಪಿಸಲು ಆಲಮಟ್ಟಿ ಜಲಾಶಯದಿಂದ ಹೆಚ್ಚು ನೀರನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಸರ್ಕಾರ ಮನವಿ ಮಾಡಿದೆ.
: ದೇಶದ ರಾಷ್ಟ್ರಪತಿಗಳ ನಿವಾಸವಾದ ರಾಷ್ಟ್ರಪತಿ ಭವನದ ಕೆಲ ಸಭಾಂಗಣಗಳ ಹೆಸರನ್ನು ಬದಲಿಸಲಾಗಿದೆ. ವಿಧ್ಯುಕ್ತ ಕಾರ್ಯಕ್ರಮಗಳು ನಡೆಯುವ ದರ್ಬಾರ್ ಹಾಲ್ ಹಾಗೂ ಅಶೋಕ ಹಾಲ್ಗಳಿಗೆ ‘ಗಣತಂತ್ರ ಮಂಟಪ’ ಮತ್ತು ‘ಅಶೋಕ ಮಂಟಪ’ ಎಂದು ಗುರುವಾರ ಮರುನಾಮಕರಣ ಮಾಡಲಾಗಿದೆ.
ಮುಂಬೈ, ಪುಣೆ ಸೇರಿದಂತೆ ಮಹಾರಾಷ್ಟ್ರದ ಹಲವು ನಗರಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು ಸಾಮಾನ್ಯ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಪುಣೆಯಲ್ಲಿ ಮಹಾಮಳೆಗೆ 4 ಮಂದಿ ಸಾವನ್ನಪ್ಪಿದ್ದಾರೆ.