1960-70ರ ದಶಕದಲ್ಲಿ ದೇಶಭಕ್ತಿ ಆಧರಿತ ಚಿತ್ರಗಳ ಮೂಲಕ ದೇಶಾದ್ಯಂತ ಮನೆಮಾತಾಗಿದ್ದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ನಟ ಮನೋಜ್ ಕುಮಾರ್ (87) ಶುಕ್ರವಾರ ಇಲ್ಲಿ ನಿಧನರಾದರು.
ವಕ್ಫ್ ತಿದ್ದುಪಡಿ ಮಸೂದೆ ಇದೀಗ ಸುಪ್ರೀಂ ಕೋರ್ಟ್ ಅಂಗಳ ತಲುಪಿದೆ. ಮಸೂದೆಯ ಸಿಂಧುತ್ವ ಪ್ರಶ್ನಿಸಿ ವಕ್ಫ್ ಮಸೂದೆ ಕುರಿತಾದ ಜೆಪಿಸಿಯ ಸದಸ್ಯರೂ ಆಗಿದ್ದ ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಾವು ಸ್ಪರ್ಧಿಸುವುದಿಲ್ಲ ಎಂದು ಹಾಲಿ ಅಧ್ಯಕ್ಷ ಕೆ. ಅಣ್ಣಾಮಲೈ ಘೋಷಿಸಿದ್ದಾರೆ. ಮುಂದಿನ ವಾರದ ಹೊತ್ತಿಗೆ ತಮಿಳುನಾಡು ಸೇರಿ 4 ರಾಜ್ಯಗಳ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪಕ್ಷದ ಹೈಕಮಾಂಡ್ ಸಜ್ಜಾಗಿರುವ ಹೊತ್ತಿನಲ್ಲೇ ಅಣ್ಣಾಮಲೈ ಇಂಥದ್ದೊಂದು ಹೇಳಿಕೆ
ವಕ್ಫ್ ತಿದ್ದುಪಡಿ ಮಸೂದೆಗೆ ಸಂಸತ್ನ ಅನುಮೋದನೆ ಸಿಕ್ಕಬೆನ್ನಲ್ಲೇ, ದೇಶವ್ಯಾಪಿ ಮುಸ್ಲಿಮರು ಬೀದಿಗಿಳಿದ ಪ್ರತಿಭಟನೆ ನಡೆಸಿದ್ದಾರೆ ಹಲವು ನಗರಗಳಲ್ಲಿ ಶುಕ್ರವಾರದ ಪ್ರಾರ್ಥನೆ ಬಳಿಕ ಪ್ರತಿಭಟನೆ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾರೆ.
ವಕ್ಫ್ ಮಂಡಳಿಯ ಆಡಳಿತದಲ್ಲಿ ಪಾರದರ್ಶಕತೆ ತರುವ, ಮಂಡಳಿಯಲ್ಲಿ ಎಲ್ಲರಿಗೂ ಅವಕಾಶ ನೀಡುವ, ಅದರ ಸರ್ವಾಧಿಕಾರಕ್ಕೆ ಕತ್ತರಿ ಹಾಕುವ ಬಹುನಿರೀಕ್ಷಿತ ವಕ್ಫ್ ತಿದ್ದುಪಡಿ ವಿಧೇಯಕಕ್ಕೆ ಸಂಸತ್ತಿನ ಅನುಮೋದನೆ ಸಿಗುವ ಕ್ಷಣ ಸನ್ನಿಹಿತವಾಗಿದೆ.