ಸರ್ಕಾರಿ ಉದ್ಯೋಗದಲ್ಲಿ 1971ರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಕುಟುಂಬದವರಿಗೆ ಶೇ.30ರಷ್ಟು ಮೀಸಲು ನೀಡುವ ನೀತಿ ವಿರೋಧಿಸಿ ಬಾಂಗ್ಲಾದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ.
ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಹಿಂದೂಗಳ ಜನ ಸಂಖ್ಯೆಯಲ್ಲಿ ಅಚ್ಚರಿಯ ಏರಿಕೆ ಕಂಡುಬಂದಿದೆ. ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರವಾಗಿರುವ ಪಾಕಿಸ್ತಾನದಲ್ಲಿ 38 ಲಕ್ಷ ಜನಸಂಖ್ಯೆಯೊಂದಿಗೆ ಹಿಂದೂ ಧರ್ಮ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾಯವಾಗಿ ಹೊರಹೊಮ್ಮಿದೆ.
ಶಿವಭಕ್ತರಾದ ಕಾವಾಡಿಗಳು ಶ್ರಾವಣದಲ್ಲಿ ಗಂಗೆಯ ಪವಿತ್ರ ನೀರು ತರಲು ಪಾದಯಾತ್ರೆ ಸಾಗುವಾಗ ಎಲ್ಲಾ ಜಿಲ್ಲೆಗಳ ಹೋಟೆಲ್, ಢಾಬಾ ಮತ್ತು ರಸ್ತೆ ಬದಿಯ ಆಹಾರ ಮಾರಾಟ ಸ್ಥಳಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ ಮಾಡಿ ಆದೇಶ
ವೈದ್ಯಕೀಯ ಕೋರ್ಸ್ಗಳ ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ನಡೆದ ಅಕ್ರಮಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಜು.20ರ ಮಧ್ಯಾಹ್ನ 12 ಗಂಟೆಯೊಳಗೆ 2024ನೇ ಸಾಲಿನ ನೀಟ್-ಯುಜಿ ಪರೀಕ್ಷೆಯ ನಗರವಾರು ಹಾಗೂ ಕೇಂದ್ರವಾರು ಸಂಪೂರ್ಣ ಫಲಿತಾಂಶವನ್ನು ಪ್ರಕಟಿಸುವಂತೆ ಆದೇಶ ನೀಡಿದೆ.
ದೇಶದಲ್ಲಿ ಮಾದಕ ವಸ್ತುಗಳ ನಿಗ್ರಹಕ್ಕೆಂದೇ ಕೇಂದ್ರ ಸರ್ಕಾರ ಆರಂಭಿಸಿರುವ ಪ್ರತ್ಯೇಕ ಸಹಾಯವಾಣಿ ‘1933’ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಚಾಲನೆ ನೀಡಿದರು.ಈ ಸಹಾಯವಾಣಿ ಸಂಖ್ಯೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ.