ದೇಶದ ಕೆಲವಡೆ ಮುಸ್ಲಿಂ ಜನಸಂಖ್ಯೆ ಹೆಚ್ಚಳ: ಆರೆಸ್ಸೆಸ್ ಪತ್ರಿಕೆ ಕಳವಳ‘ದೇಶದ ಕೆಲವು ಭಾಗಗಳಲ್ಲಿ ಮುಸ್ಲಿಮರ ಜನಸಂಖ್ಯೆ ಗಮನಾರ್ಹವಾಗಿ ಬೆಳವಣಿಗೆ ಕಾಣುತ್ತಿದೆ. ಇದು ಜನಸಂಖ್ಯಾ ಅಸಮತೋಲನಕ್ಕೆ ಕಾರಣವಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿರುವ ಆರ್ಎಸ್ಎಸ್-ಸಂಬಂಧಿತ ನಿಯತಕಾಲಿಕ ‘ಆರ್ಗನೈಸರ್’, ‘ಸಮಗ್ರ ರಾಷ್ಟ್ರೀಯ ಜನಸಂಖ್ಯಾ ನಿಯಂತ್ರಣ ನೀತಿ’ಯನ್ನು ಪರಿಚಯಿಸುವ ಅಗತ್ಯ ಇದೆ ಎಂದು ಒತ್ತಿಹೇಳಿದೆ.