ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಲಾಪತಾ ಲೇಡಿಸ್ ಹಿಂದಿ ಚಿತ್ರದ ರೀತಿಯಲ್ಲೇ ಅವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ನೀಡಬೇಕು ಎಂದು ರಾಜ್ಯಸಭಾ ಸದಸ್ಯ, ಹಿರಿಯ ವಕೀಲ ಕಪಿಲ್ ಸಿಬಲ್ ಒತ್ತಾಯಿಸಿದ್ದಾರೆ.
ಆರ್ಥಿಕತೆಯಲ್ಲಿ ಬಲಿಷ್ಠವಾಗುತ್ತಿರುವ ಭಾರತ, ವಿಶ್ವಗುರುವಾಗುವತ್ತ ದಾಪುಗಾಲಿಡುತ್ತಿದೆ ಎಂಬ ಹೆಮ್ಮೆಯ ಮಾತುಗಳ ನಡುವೆಯೇ, ‘ಭಾರತ ಕೇವಲ ಆರ್ಥಿಕತೆಯಿಂದ ವಿಶ್ವಗುರುವಾಗಲು ಸಾಧ್ಯವಿಲ್ಲ, ಧರ್ಮ ಮತ್ತು ಅಧ್ಯಾತ್ಮದ ಬೆಳವಣಿಗೆಯೂ ಅಗತ್ಯ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯ
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್ಸಿಎ) ಆಯೋಜಿಸುತ್ತಿರುವ ಚೊಚ್ಚಲ ಆವೃತ್ತಿಯ ಮಹಾರಾಣಿ ಟ್ರೋಫಿ ಟಿ20 ಟೂರ್ನಿಯ ಲೀಗ್ ಹಂತಕ್ಕೆ ತೆರೆ ಬಿದ್ದಿದೆ.
ಭಾರತ ಮತ್ತು ರಷ್ಯಾ ಸಂಬಂಧದಿಂದ ಕುಪಿತರಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆರಿಗೆ ಬರೆ ಹಾಕುತ್ತಿರುವ ಹೊತ್ತಲ್ಲೇ, ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೂರವಾಣಿ ಮೂಲಕ ಶುಕ್ರವಾರ ಮಾತುಕತೆ ನಡೆಸಿದ್ದಾರೆ.
ಪಹಲ್ಗಾಂ ದಾಳಿ ಬಳಿಕದ ಭಾರತ-ಪಾಕ್ ನಡುವಿನ ಸಂಘರ್ಷ ನಿಲ್ಲಿಸುವಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇರ ಪಾತ್ರವಹಿಸಿದ್ದರು ಎಂದು ಇದೀಗ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಕೂಡ ಹೇಳಿದ್ದಾರೆ.