90 ಸದಸ್ಯ ಬಲದ ಹರ್ಯಾಣ ವಿಧಾನಸಭೆ ಚುನಾವಣೆ ಶನಿವಾರ ನಡೆಯಲಿದೆ. ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್ನ ಭೂಪಿಂದರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್ ಫೋಗಟ್, ಜೆಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಶಿಕ್ಷಣ ಮತ್ತು ಉದ್ಯೋಗಕ್ಕೆ ಇರುವ ಶೇ.50ರಷ್ಟು ಮೀಸಲು ಮಿತಿ ರದ್ದು ಮಾಡಬೇಕು. ತಮಿಳುನಾಡು ಸರ್ಕಾರ ಶೆ.78ರಷ್ಟು ಮೀಸಲು ನೀಡಬಹುದಾದರೆ ಅದನ್ನು ಮಹಾರಾಷ್ಟ್ರದಲ್ಲಿ ಏಕೆ ಜಾರಿಗೆ ತರಲಾಗದು ಎಂದು ಎನ್ಸಿಪಿ ನಾಯಕ ಶರದ್ ಪವಾರ್ ಒತ್ತಾಯಿಸಿದ್ದಾರೆ.