ಚುನಾವಣಾ ಆಯೋಗವು ಈಗ ಪ್ರಜಾಪ್ರಭುತ್ವದ ಕಾವಲುಗಾರನಾಗಿ ಉಳಿದಿಲ್ಲ. ತನ್ನ ಜವಾಬ್ದಾರಿ ಮರೆತು ಕಾರ್ಯಾಂಗದ ಕೈಗೊಂಬೆಯಾಗಿದೆ. ಇದರ ವಿರುದ್ಧದ ಹೋರಾಟವನ್ನು ಕಾಂಗ್ರೆಸ್ ಸಂಸತ್ತಿನಿಂದ ಜನರ ನ್ಯಾಯಾಲಯದ ಮುಂದೆ ಕೊಂಡೊಯ್ಯಲಿದೆ.
‘ಭಾರತ ಎಂದಿಗೂ ರೈತರ ಹಿತಾಸಕ್ತಿಯ ವಿಷಯದಲ್ಲಿ ರಾಜಿಯಾಗುವುದಿಲ್ಲ. ಅದಕ್ಕೆ ನಾನು ವೈಯಕ್ತಿಕವಾಗಿ ಬೆಲೆ ತೆರಲೂ ಸಿದ್ಧ’ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಭಾರತದ ಆಮದಿನ ಮೇಲೆ ಶೇ.50ರಷ್ಟು ತೆರಿಗೆ ಹೇರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶದಿಂದ ಭಾರತದ ರಫ್ತಿನ ಮೇಲೆ ಹೆಚ್ಚಿನ ಪರಿಣಾಮ ಬೀರದು. ಭಾರತದ ಒಟ್ಟಾರೆ ರಫ್ತಿನ ಪೈಕಿ ಶೇ.95ರಷ್ಟು ಉತ್ಪನ್ನಗಳು ಹೆಚ್ಚುವರಿ ತೆರಿಗೆ ಹೊರೆಯಿಂದ ದೂರ ಇದೆ ಎಂದು ಬಿಜೆಪಿ ಹೇಳಿದೆ.
ಹಲವು ದೇಶಗಳು ಭಾರೀ ಪ್ರಮಾಣದಲ್ಲಿ ತೈಲ ಖರೀದಿ ಮಾಡುತ್ತಿದ್ದರೂ, ಕೇವಲ ಭಾರತವನ್ನು ಮಾತ್ರ ಅಮೆರಿಕ ಏಕೆ ಗುರಿಯಾಗಿಸಿಕೊಂಡಿದೆ ಎಂಬ ಪ್ರಶ್ನೆಗೆ ನೇರ ಉತ್ತರ ನೀಡುವುದರಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚಿಕೊಂಡಿದ್ದಾರೆ.