ಮೋದಿ ಮಂತ್ರಿಮಂಡಲ ಸೇರಲು ಎನ್ಸಿಪಿ (ಅಜಿತ್ ಪವಾರ್ ಬಣ) ಭಾನುವಾರ ನಿರಾಕರಿಸಿದೆ. ಏಕೆಂದರೆ ಸಂಪುಟ ದರ್ಜೆ ಸ್ಥಾನಮಾನ ನೀಡದೇ ರಾಜ್ಯ ದರ್ಜೆ ನೀಡಿದ್ದಕ್ಕೆ ಪಕ್ಷದ ನೇತಾರ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಸಚಿವಾಕಾಂಕ್ಷಿ ಪ್ರಫುಲ್ ಪಟೇಲ್ ಕಿಡಿಕಾರಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸ್ವ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಲೀಡ್ ಕೊಡಿಸಲು ವಿಫಲರಾಗಿ ರಾಹುಲ್ ಗಾಂಧಿ ಅವರ ಕೆಂಗಣ್ಣಿಗೆ ಗುರಿಯಾದ ಕೆಲವು ಸಚಿವರು ತಮ್ಮ ಪತ್ನಿ, ಪುತ್ರ ಹಾಗೂ ಸಂಬಂಧಿಕರೇ ಸ್ಪರ್ಧಿಸಿದ್ದರೂ ಅವರಿಗೆ ಲೀಡ್ ಕೊಡಿಸಲು ಸಾಧ್ಯವಾಗಿಲ್ಲ.
ಲೋಕಸಭೆ ಚುನಾವಣೆ ಬಳಿಕ ಇಂಡಿಯಾ ಕೂಟದವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸೆಳೆಯಲು ಪ್ರಧಾನ ಮಂತ್ರಿ ಹುದ್ದೆಯ ಆಫರ್ ನೀಡಿದ್ದರು.