ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಕಾಂಗ್ರೆಸ್ನ ಶಶಿ ತರೂರ್ ವಿರುದ್ಧ 16 ಸಾವಿರ ಮತಗಳಿಂದ ಸೋತಿದ್ದಾರೆ.
ಗಾಂಧಿ ಕುಟುಂಬದ ಕುಡಿ ರಾಹುಲ್ ಗಾಂಧಿ ಈ ಬಾರಿಯ ಲೋಕಸಭೆ ಚುನಾವಣೆ ಮೂಲಕ ಪ್ರಬಲ ರಾಜಕೀಯ ನಾಯಕನಾಗಿ ಹೊರಹೊಮ್ಮುವಲ್ಲಿ ಯಶಸ್ವಿಯಾಗಿದ್ದಾರೆ.
10 ವರ್ಷಗಳ ಹಿಂದೆ ನರೇಂದ್ರ ಮೋದಿಯವರ ಅಬ್ಬರದ ಗೆಲುವಿನ ಬಳಿಕ ನೆಲಕಚ್ಚಿದ್ದ 140 ವರ್ಷಗಳ ಇತಿಹಾಸವಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಈ ಬಾರಿಯ ಲೋಕಸಭೆ ಚುನಾವಣೆಯ ಮೂಲಕ ಪುನಃ ಫೀನಿಕ್ಸ್ ಹಕ್ಕಿಯಂತೆ ಎದ್ದುಬಂದಿದೆ.