‘ರೆಮೆಲ್’ ಭಾನುವಾರ ತಡರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದೆ. ಗಂಟೆಗೆ 135 ಕಿ.ಮೀ.ವರೆಗೂ ವೇಗದಲ್ಲಿ ಲಗ್ಗೆ ಇಟ್ಟ ಈ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳ, ಒಡಿಶಾ, ಅಸ್ಸಾಂ, ಮೇಘಾಲಯ, ಮಣಿಪುರ, ನಾಗಾಲ್ಯಾಂಡ್, ಅರುಣಾಚಲಪ್ರದೇಶ ಹಾಗೂ ತ್ರಿಪುರದಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ.
ದೆಹಲಿಯಲ್ಲಿ ಮಕ್ಕಳ ಆಸ್ಪತ್ರೆಗೆ ಬೆಂಕಿ ಬಿದ್ದು, ಕನಿಷ್ಠ 7 ಮಕ್ಕಳು ಸಾವನ್ನಪ್ಪಿದ್ದಾರೆ.
ಇಂಡಿಯಾ ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಲ್ಲಿ ರಾಷ್ಟ್ರದ ಬಹುಸಂಖ್ಯಾತರನ್ನು ದ್ವಿತೀಯ ದರ್ಜೆ ಪ್ರಜೆಗಳನ್ನಾಗಿ ಮಾಡುವಂತಹ ವಾತಾವರಣ ಸೃಷ್ಟಿಸಲಿದೆ. ಜೊತೆಗೆ ಧರ್ಮಾಧಾರಿತ ಮೀಸಲು ನೀಡಲು ಅದು ಚಿಂತಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು