ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಧಿಕೃತವಾಗಿ ತೆರಿಗೆ ಆದೇಶಕ್ಕೆ ಅಂಕಿತ ಹಾಕಿದ್ದಾರೆ. ಭಾರತದ ಮೇಲೆ ಶೇ.25ರಷ್ಟು ಸುಂಕ ವಿಧಿಸಲಾಗಿದ್ದು, ಇದು ಆ.7ರಿಂದ ತೆರಿಗೆ ಜಾರಿಯಾಗಲಿದೆ.
ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನೂ ಬಂಧಿಸುವಂತೆ ಹಿರಿಯ ಅಧಿಕಾರಿಗಳು ನನ್ನ ಮೇಲೆ ಒತ್ತಡ ಹೇರಿದ್ದರು ಎಂದು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಮಾಜಿ ಅಧಿಕಾರಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.
2008ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಮಹಾರಾಷ್ಟ್ರ ಎಟಿಎಸ್ 7 ಜನರನ್ನು ಬಂಧಿಸಿದ ಬಳಿಕ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸೇರಿದಂತೆ ಕೆಲ ನಾಯಕರು ಮೊದಲ ಬಾರಿಗೆ ಹಿಂದೂ ಭಯೋತ್ಪಾದನೆಯ ಪದ ಬಳಸಿದ್ದರು. ಅದು ದೇಶದಲ್ಲಿ ಭಯೋತ್ಪಾದನೆಯನ್ನು ಹಿಂದೂಗಳ ತಲೆಗೆ ಕಟ್ಟಿದ ಮೊದಲ ಪ್ರಕರಣ
ಮುಂಬೈನಿಂದ 200 ಕಿ.ಮೀ. ದೂರದಲ್ಲಿರುವ, ಮುಸ್ಲಿಂ ಬಾಹುಳ್ಯದ ಮಾಲೇಗಾಂವ್ನಲ್ಲಿ 6 ಜನರನ್ನು ಬಲಿ ಪಡೆದಿದ್ದ ಬೈಕ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ ಎಲ್ಲಾ 7 ಆರೋಪಿಗಳನ್ನು ನಿರ್ದೋಷಿಗಳು ಎಂದು ಘೋಷಿಸಿ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.