ನಿಜಾಂ ಸರ್ಕಾರದ ಆಡಳಿತದಲ್ಲೇ ಹೆಣ್ಣುಮಕ್ಕಳ ಮಾಂಗಲ್ಯಕ್ಕೆ ಕೈ ಹಾಕುವ ಧೈರ್ಯ ಇರಲಿಲ್ಲ. ಈಗ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವವಿದ್ದು, ಮಹಿಳೆಯರ ಮಂಗಳಸೂತ್ರಕ್ಕಾಗಿ ಕಾಂಗ್ರೆಸ್ ಪಕ್ಷ ತನ್ನ ಪ್ರಾಣ ಕೊಡಲೂ ಸಿದ್ಧವಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದಕ್ಕೆ ದೆಹಲಿ ಪೊಲೀಸರು ಹೈದರಾಬಾದ್ನ ನನ್ನ ಮನೆಗೆ ನೋಟಿಸ್ ಕೊಡಲು ಬಂದಿದ್ದಾರಂತೆ. ಮೋದಿಯವರು ದೆಹಲಿ ಪೊಲೀಸರನ್ನು ನನ್ನ ವಿರುದ್ಧ ಈಗ ಛೂ ಬಿಟ್ಟಿದ್ದಾರೆ.