ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಕಾಂಗ್ರೆಸ್ನ ಶಶಿ ತರೂರ್ ವಿರುದ್ಧ 16 ಸಾವಿರ ಮತಗಳಿಂದ ಸೋತಿದ್ದಾರೆ.
ಗಾಂಧಿ ಕುಟುಂಬದ ಕುಡಿ ರಾಹುಲ್ ಗಾಂಧಿ ಈ ಬಾರಿಯ ಲೋಕಸಭೆ ಚುನಾವಣೆ ಮೂಲಕ ಪ್ರಬಲ ರಾಜಕೀಯ ನಾಯಕನಾಗಿ ಹೊರಹೊಮ್ಮುವಲ್ಲಿ ಯಶಸ್ವಿಯಾಗಿದ್ದಾರೆ.
10 ವರ್ಷಗಳ ಹಿಂದೆ ನರೇಂದ್ರ ಮೋದಿಯವರ ಅಬ್ಬರದ ಗೆಲುವಿನ ಬಳಿಕ ನೆಲಕಚ್ಚಿದ್ದ 140 ವರ್ಷಗಳ ಇತಿಹಾಸವಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಈ ಬಾರಿಯ ಲೋಕಸಭೆ ಚುನಾವಣೆಯ ಮೂಲಕ ಪುನಃ ಫೀನಿಕ್ಸ್ ಹಕ್ಕಿಯಂತೆ ಎದ್ದುಬಂದಿದೆ.
2024 ಲೋಕಸಭಾ ಚುನಾವಣೆಯ ಫಲಿತಾಂಶ ವಿಚಿತ್ರ ಸನ್ನಿವೇಶ ಸೃಷ್ಟಿಸಿದೆ. ಇಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದರೂ ಅದನ್ನು ಸಂಭ್ರಮಿಸುವ ಪರಿಸ್ಥಿತಿಯಲ್ಲಿ ಕೂಟದ ನಾಯಕರಿಲ್ಲ. ಮತ್ತೊಂದೆಡೆ ಕಾಂಗ್ರೆಸ್ ನೇತೃತ್ವದ ಇಂಡಿ ಕೂಟಕ್ಕೆ ಒಂದು ರೀತಿಯಲ್ಲಿ ಸಂಭ್ರಮದ ಸನ್ನಿವೇಶ.
ಸೋಮವಾರ 2500 ಅಂಕಗಳ ಭಾರೀ ಏರಿಕೆ ಕಂಡಿದ್ದ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಮಂಗಳವಾರ 4389 ಅಂಕಗಳ ಭಾರೀ ಕುಸಿತ ಕಂಡು 72079ರಲ್ಲಿ ಮುಕ್ತಾಯವಾಗಿದೆ. ಹೂಡಿಕೆದಾರರ ಸಂಪತ್ತು 31 ಲಕ್ಷ ಕೋಟಿ ರು.ನಷ್ಟು ಕರಗಿದೆ.