ಭಾರತ ಮತ್ತು ಶ್ರೀಲಂಕಾ ನಡುವೆ ಇರುವ ಕಚತೀವು ದ್ವೀಪವನ್ನು ಅಂದಿನ ಪಂ। ಜವಾಹರಲಾಲ್ ನೆಹರು ಹಾಗೂ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರಗಳು ತಮ್ಮ ನಿರ್ಲಕ್ಷ್ಯದಿಂದ ಶ್ರೀಲಂಕಾಗೆ ಬಿಟ್ಟುಕೊಟ್ಟಿದ್ದವು ಎಂಬ ‘ರಹಸ್ಯ’ ವಿಷಯವೊಂದು ಬಯಲಾಗಿದೆ.