ಭಾರತದ ಜತೆ ಪ್ರವಾಸೋದ್ಯಮ ವಿಚಾರದಲ್ಲಿ ಕಾದಾಟಕ್ಕಿಳಿದು ದ್ವಿಪಕ್ಷೀಯ ಸಂಬಂಧ ಕಡಿದುಕೊಳ್ಳಲೂ ಮುಂದಾಗಿದ್ದ ಮಾಲ್ಡೀವ್ಸ್ ಈಗ ತಣ್ಣಗಾಗಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ದ್ವೀಪದೇಶಕ್ಕೆ ನೀಡಿದ ಮೊದಲ ಭೇಟಿ ಯಶಸ್ಸು
2011ರಲ್ಲಿ ದೇಶದಲ್ಲಿ ಸುದ್ದಿ ಮಾಡಿದ್ದ ಕೇರಳದ ಸೌಮ್ಯಾ ಅತ್ಯಾಚಾ*, ಕೊಲೆ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬ, ಗೋಡೆ ಹಾರಿ ಪರಾರಿಯಾದ ಘಟನೆ ಶುಕ್ರವಾರ ನಸುಕಿನಲ್ಲಿ ನಡೆದಿದೆ. ಆದರೆ ಕೆಲವೇ ಗಂಟೆಗಳ ಬಳಿಕ ಸಿಕ್ಕಿಬಿದ್ದಿದ್ದಾನೆ.
ಗಡಿಯಲ್ಲಿರುವ ಹಿಂದೂ ಶಿವ ದೇವಸ್ಥಾನದ ಮೇಲಿನ ಅಧಿಕಾರದ ವಿಚಾರವಾಗಿ ಆರಂಭವಾಗಿದ್ದ ಥಾಯ್ಲೆಂಡ್ ಮತ್ತು ಕಾಂಬೋಡಿಯಾ ಸಮರಕ್ಕೆ 2ನೇ ದಿನವಾದ ಶುಕ್ರವಾರ ಬ್ರೇಕ್ ಬಿದ್ದಿದ್ದು, ಕದನ ವಿರಾಮಕ್ಕೆ ಉಭಯ ದೇಶಗಳು ಸಮ್ಮತಿಸಿವೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಆಡಳಿತದಲ್ಲಿ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳು ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದನ್ನು ಸಹಿಸುವುದಿಲ್ಲ ಎಂದು ಸಚಿವ ಕೆ.ಎನ್. ರಾಜಣ್ಣ ಹಾಗೂ ಕೆಲ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಕೋಮು ಸೌಹಾರ್ದತೆ ಸ್ಥಾಪಿಸುವ ಉದ್ದೇಶದೊಂದಿಗೆ, ಹಿಂದೂಗಳು ಮತ್ತು ಮುಸಲ್ಮಾನರ ನಡುವೆ ಮಾತುಕತೆ ಏರ್ಪಡಿಸಬೇಕು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಇಸ್ಲಾಂನ ಕೆಲ ಪ್ರಮುಖ ಧರ್ಮಗುರುಗಳು ನಿರ್ಧರಿಸಿದ್ದಾರೆ
ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ರಾಜೀನಾಮೆ ದಿಢೀರ್ ಎಂದು ಆಗಿದ್ದಲ್ಲ. ಸರ್ಕಾರ ಮತ್ತು ಧನಕರ್ ನಡುವೆ ಸುದೀರ್ಘ ಸಮಯದಿಂದ ನಾನಾ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯ ಮೂಡಿತ್ತು.