ಒಂದು ದೇಶ, ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಬಿಜೆಪಿ ಪ್ರಣಾಳಿಕೆ ಭಾಗ?ಈ ಹಿಂದಿನ ಚುನಾವಣೆಗಳಲ್ಲಿ ಘೋಷಿಸಿದ್ದ ಪ್ರಮುಖ ಭರವಸೆಗಳನ್ನು ಈಡೇಸಿರುವ ಭಾರತೀಯ ಜನತಾ ಪಕ್ಷ, 2024ರ ಲೋಕಸಭಾ ಚುನಾವಣೆಗೆ ತನ್ನ ಮುಂದಿನ ಮಹತ್ವಕಾಂಕ್ಷಿ ಯೋಜನೆಗಳಾದ ‘ಒಂದು ದೇಶ, ಒಂದು ಚುನಾವಣೆ’ ಮತ್ತು ‘ಏಕರೂಪ ನಾಗರಿಕ ಸಂಹಿತೆ’ಯನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಾಧ್ಯತೆ ಇದೆ.