189 ಜನರ ಬಲಿ ಪಡೆದ 2006ರ ಮುಂಬೈ ರೈಲು ಸ್ಫೋಟದ 12 ಆರೋಪಿಗಳನ್ನು ದೋಷಮುಕ್ತಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ.
ಅಂತಾರಾಷ್ಟ್ರೀಯ ಮಾಸ್ಟರ್ ದಿವ್ಯಾ ದೇಶ್ಮುಖ್ ಇಲ್ಲಿ ನಡೆಯುತ್ತಿರುವ ಫಿಡೆ ಮಹಿಳಾ ವಿಶ್ವಕಪ್ ಫೈನಲ್ಗೆ ಲಗ್ಗೆಯಿಟ್ಟಿದ್ದಾರೆ. ಬುಧವಾರ ನಡೆದ ಸೆಮಿಫೈನಲ್ನ 2ನೇ ಸುತ್ತಿನಲ್ಲಿ ಮಾಜಿ ವಿಶ್ವ ಚಾಂಪಿಯನ್, ಚೀನಾದ ಝಾಂಗ್ಯೀ ಟಾನ್ ವಿರುದ್ಧ 1.5-0.5 ಅಂಕಗಳಲ್ಲಿ ಗೆಲುವು ಸಾಧಿಸಿದರು.
ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಜಾರಿಗೊಳಿಸಿದ್ದು ತಾನೇ ಎಂದು ಹೇಳಿಕೊಳ್ಳುತ್ತಿರುವ ಅಮೆರಿಕ ಅಧ್ಯಕ್ಷ ಟ್ರಂಪ್, ಅದೇ ಮಾತನ್ನು ಮಂಗಳವಾರ 25ನೇ ಬಾರಿ ಪುನರುಚ್ಚರಿಸಿದ್ದಾರೆ.