ಸಂವಿಧಾನಕ್ಕೆ ಅಪಾಯ ಇರುವುದು ಆರ್ಎಸ್ಎಸ್ನಿಂದ: ಸಿದ್ದರಾಮಯ್ಯಪ್ರಧಾನಿ ನರೇಂದ್ರ ಮೋದಿ ಅವರು ಹೇಳಬೇಕಿರುವುದು ಯಾವ ಆರೆಸ್ಸೆಸ್ ನಾಯಕರು ಹೇಳಿದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದೇ ಹೊರತು, ಡಾ.ಬಿ.ಆರ್.ಅಂಬೇಡ್ಕರ್ ಅವರು ಮತ್ತೆ ಹುಟ್ಟಿ ಬಂದರೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ ಎಂದಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.