ಆಡಳಿತಾರೂಢ ಜೆಎಂಎಂ- ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸೆಳೆಯಬಹುದು, ಜಾರ್ಖಂಡ್ ಸರ್ಕಾರ ಪತನಕ್ಕೆ ಕಾರಣವಾಗಬಹುದು ಎಂಬ ಲೆಕ್ಕಾಚಾರಗಳು ಹುಸಿಯಾಗಿದ್ದು, ಮುಖ್ಯಮಂತ್ರಿ ಚಂಪೈ ಸೊರೇನ್ ನೇತೃತ್ವದ ಸರ್ಕಾರ ಸೋಮವಾರ ಬಹುಮತ ಪರೀಕ್ಷೆಯಲ್ಲಿ ಪಾಸಾಗಿದೆ.