ರೈತರ ಹೋರಾಟಕ್ಕೆ ಮಣಿದು, ಪ್ರಸ್ತಾವಿತ ಏರೋಸ್ಪೇಸ್ ಪಾರ್ಕ್ ಸ್ಥಾಪನೆಗಾಗಿ ದೇವನಹಳ್ಳಿಯ 1,777 ಎಕರೆ ಭೂಸ್ವಾಧೀನ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರ ಕೈಬಿಟ್ಟ ಬೆನ್ನಲ್ಲೇ, ಇದೇ ಅವಕಾಶವನ್ನು ತನ್ನ ಲಾಭಕ್ಕೆ ತಿರುಗಿಸಿಕೊಳ್ಳಲು ಆಂಧ್ರಪ್ರದೇಶ ಸರ್ಕಾರ ಕಸರತ್ತು ಆರಂಭಿಸಿದೆ.