ಡೊನಾಲ್ಡ್ ಟ್ರಂಪ್ ‘ರಷ್ಯಾ ಭೂಪ್ರದೇಶದ ತೀರಾ ಒಳ ನುಗ್ಗಿ ರಾಜಧಾನಿ ಮಾಸ್ಕೋ ಮೇಲೆ ದಾಳಿ ನಡೆಸಿದರೆ ನೆರವು ನೀಡುತ್ತೇವೆ’ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಜೆಲೆನ್ಸ್ಕಿ ಅವರಿಗೆ ಖಾಸಗಿಯಾಗಿ ಪ್ರೋತ್ಸಾಹ ನೀಡಿದ್ದಾರೆ ಎಂದು ಫೈನಾನ್ಷಿಯಲ್ ಟೈಮ್ಸ್ ಪತ್ರಿಕೆ ವರದಿ
ವಿಶ್ವದ ನಂ.1 ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಒಡೆತನದ ವಿಶ್ವವಿಖ್ಯಾತ ಎಲೆಕ್ಟ್ರಿಕ್ ಕಾರು ಕಂಪನಿಯಾದ ಟೆಸ್ಲಾ ಸಂಸ್ಥೆಯು ಭಾರತದಲ್ಲಿ ಅಧಿಕೃತವಾಗಿ ತನ್ನ ಕಾರ್ಯಾಚರಣೆಯನ್ನು ಮಂಗಳವಾರದಿಂದ ಆರಂಭಿಸಿದೆ.
ಹಿರಿಯ ನಟ ಮತ್ತು ನಿರ್ಮಾಪಕ ಧೀರಜ್ ಕುಮಾರ್ (79) ಮಂಗಳವಾರ ನಿಧನರಾದರು.
ನ್ಯುಮೋನಿಯಾದಿಂದ ಬಳಲುತ್ತಿದ್ದ ಕುಮಾರ್ ಅವರ ಸ್ಥಿತಿ ಬಿಗಡಾಯಿಸಿದ ಕಾರಣ, ಅವರನ್ನು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು,
ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ 18 ದಿನಗಳನ್ನು ಕಳೆದಿರುವ ಭಾರತೀಯ ಶುಭಾಂಶು ಶುಕ್ಲಾ ಹಾಗೂ ಇತರೆ ಮೂವರು ಗಗನಯಾತ್ರಿಗಳು ಐಎಸ್ಎಸ್ನಿಂದ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಪ್ರವೇಶಿಸಿ, ಧರೆಯತ್ತ ತಮ್ಮ 22 ತಾಸುಗಳ ಪ್ರಯಾಣವನ್ನು ಆರಂಭಿಸಿದ್ದಾರೆ.
‘ಯೆಮೆನ್ನಲ್ಲಿ ಜು.16ರಂದು ಗಲ್ಲುಶಿಕ್ಷೆಗೆ ಗುರಿಯಾಗಲಿರುವ ನಿಮಿಷ ಪ್ರಿಯಾ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಹೆಚ್ಚಿನ ಅಧಿಕಾರ ಇಲ್ಲ. ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ಬ್ಲಡ್ ಮನಿ ನೀಡುವುದೊಂದೇ ಸದ್ಯಕ್ಕೆ ಆಕೆಯನ್ನು ಉಳಿಸಬಲ್ಲ ದಾರಿ ’ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.