‘ಪತಿ - ಪತ್ನಿ ನಡುವಿನ ಫೋನ್ ಸಂಭಾಷಣೆಯನ್ನು ರಹಸ್ಯವಾಗಿ ರೆಕಾರ್ಡ್ ಮಾಡಿಕೊಳ್ಳುವುದು ವಿಚ್ಛೇದನ ಪ್ರಕರಣದಲ್ಲಿ ಸ್ವೀಕಾರ್ಹ ಸಾಕ್ಷಿಯಾಗಿ ಪರಿಗಣನೆಯಾಗುತ್ತದೆ. ಇದು ದಂಪತಿಗಳ ನಡುವಿನ ವೈವಾಹಿಕ ಸಂಬಂಧ ಅಷ್ಟೊಂದು ಬಲವಾಗಿಲ್ಲ ಎಂಬುದನ್ನು ಬಿಂಬಿಸುತ್ತದೆ’
ಬಿಹಾರದಲ್ಲಿ ನಡೆಯುತ್ತಿರುವ ಮತದಾರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್ಐಆರ್) ವೇಳೆ ಈಗಾಗಲೇ 35 ಲಕ್ಷ ಅನರ್ಹ ಮತದಾರರನ್ನು ಗುರುತಿಸಲಾಗಿದ್ದು, ಅವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ದಾಖಲೆ ಸಲ್ಲಿಕೆಗೆ ಜು.25ರ ತನಕ ಸಮಯವಿರುವ ಕಾರಣ, ಈ ಸಂಖ್ಯೆ ಇನ್ನೂ ಹೆಚ್ಚಲಿದೆ.
ಸಣ್ಣ ಗಾತ್ರದ ವ್ಯಾಪಾರಿಗಳಿಗೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಎಸ್ಟಿ ತೆರಿಗೆ ನೋಟಿಸ್ಗಳು ಬರುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿನ ಅನೇಕ ವ್ಯಾಪಾರಿಗಳು ಯುಪಿಐ ಮೂಲಕ ಹಣ ಸ್ವೀಕರಿಸುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ.
‘ದೇಶದಲ್ಲಿ ಶೀಘ್ರದಲ್ಲಿಯೇ 500 ರು. ಮುಖಬೆಲೆಯ ನೋಟುಗಳು ರದ್ದಾಗಲಿದೆ’ ಎಂಬ ಸಂದೇಶ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ (ಐಎಸ್ಎಸ್) 18 ದಿನ ತಂಗಿದ್ದ ಭಾರತೀಯ ಗಗನಯಾನಿ ಶುಭಾಂಶು ಶುಕ್ಲಾ ಹಾಗೂ ಇತರೆ ಮೂವರು ಗಗನಯಾತ್ರಿಗಳು ಭಾರತೀಯ ಕಾಲಮಾನ ಸೋಮವಾರ ಸಂಜೆ 4.35ಕ್ಕೆ ಭೂಮಿಯತ್ತ ಪ್ರಯಾಣ ಆರಂಭಿಸಲಿದ್ದಾರೆ.