ಹರ್ಯಾಣ ಡ್ರಾಮಾ: ಖಟ್ಟರ್ ಔಟ್, ಸೈನಿ ಹೊಸ ಸಿಎಂಹರ್ಯಾಣದಲ್ಲಿ ಮಂಗಳವಾರ ನಡೆದ ದಿಢೀರ್ ಹೈಡ್ರಾಮಾದಲ್ಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ, ಒಬಿಸಿ ನಾಯಕ ನಯಬ್ ಸಿಂಗ್ ಸೈನಿ ಆಯ್ಕೆಯಾಗಿದ್ದು, ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.