ಆಸ್ಥಾ ಪೂನಿಯಾ, ನೌಕಾ ಯುದ್ಧ ವಿಮಾನದ ಮೊಟ್ಟ ಮೊದಲ ಮಹಿಳಾ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ನೌಕಾಪಡೆಯ ಯುದ್ಧವಿಮಾನಗಳಲ್ಲಿ ಮಹಿಳಾ ಪೈಲಟ್ಗಳ ಹೊಸ ಯುಗಕ್ಕೆ ನಾಂದಿ ಹಾಡಿದ್ದಾರೆ.
ಸೂಪರ್ ಯುನೈಟೆಡ್ ಚೆಸ್ ಟೂರ್ನಿಯಲ್ಲಿ ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್, ವಿಶ್ವದ ನಂ.1 ಆಟಗಾರ, 5 ಬಾರಿ ವಿಶ್ವ ಚಾಂಪಿಯನ್ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ರನ್ನು 6ನೇ ಸುತ್ತಿನಲ್ಲಿ ಸೋಲಿಸಿ, ಅಗ್ರಸ್ಥಾನವನ್ನು ಕಾಯ್ದುಕೊಂಡರು.
ಇಲ್ಲಿನ ಎಜ್ಬಾಸ್ಟನ್ನ ಪಿಚ್ ನಿರೀಕ್ಷೆಯಂತೆಯೇ ‘ಹೈವೇ’ ರೀತಿ ವರ್ತಿಸುತ್ತಿದ್ದು, ಭಾರತ ಹಾಗೂ ಇಂಗ್ಲೆಂಡ್ ಬ್ಯಾಟರ್ಗಳು ಹಬ್ಬ ಆಚರಿಸುತ್ತಿದ್ದಾರೆ.
ಶುಭಾಂಶು ಶುಕ್ಲಾ ಅವರು ಜುಲೈ 4 ರಂದು ಶುಕ್ರವಾರ ಸಂಜೆ ‘ಹ್ಯಾಂ ರೇಡಿಯೋ’ ಮುಖಾಂತರ ಅಂತಾರಾಷ್ಟ್ರೀಯ ಅಂತರಿಕ್ಷ ನಿಲ್ದಾಣದಲ್ಲಿರುವ ತಮ್ಮ ಕಕ್ಷೀಯ ಸ್ಥಳದಿಂದ ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ಇಸ್ರೋ) ಯ ವಿಜ್ಞಾನಿಗಳು ಹಾಗೂ ಶಾಲಾ ಮಕ್ಕಳೊಂದಿಗೆ ಸಂಭಾಷಣೆ ನಡೆಸಲಿದ್ದಾರೆ.
ಹೃದಯಾಘಾತದ ಸಾವುಗಳಿಗೆ ಕೋವಿಡ್ ಲಸಿಕೆಯೇ ಕಾರಣ ಎಂದಿದ್ದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆ ತಜ್ಞರು, ಕೋವಿಶೀಲ್ಡ್ ಲಸಿಕೆ ತಯಾರಕರಾದ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಹಾಗೂ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ತಳ್ಳಿ ಹಾಕಿದ್ದಾರೆ.
ಬೌದ್ಧ ಧರ್ಮಗುರು ದಲೈಲಾಮಾರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ಅಧಿಕಾರ ಸ್ವತಃ ದಲೈಲಾಮಾ ಅವರಿಗೆ ಹಾಗೂ ಅವರು ಸ್ಥಾಪಿಸಿದ ಸಂಸ್ಥೆಗೆ ಇದೆಯೇ ಹೊರತು ಬೇರಾರಿಗೂ ಇಲ್ಲ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.