ಮರಾಠಿ ಮಾತಾಡದ ಆಹಾರ ಮಳಿಗೆ ವ್ಯಾಪಾರಿ ಮೇಲೆ ಎಂಎನ್ಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಬೆನ್ನಲ್ಲೆ, ಮರಾಠಿಯೇತರ ವ್ಯಾಪಾರಸ್ಥರನ್ನು ಕಚೇರಿಗೆ ಕರೆಸಿ ಶಿವಸೇನಾ (ಯುಬಿಟಿ) ನಾಯಕನೊಬ್ಬ ಥಳಿಸಿ, ನಿಂದಿಸಿದ ಆಘಾತಕಾರಿ ಘಟನೆ ನಡೆದಿದೆ.
ಆಪರೇಷನ್ ಸಿಂದೂರ ಸಮಯದಲ್ಲಿ ಭಾರತ ಹಾರಿಸಿದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯು ಪರಮಾಣು ಸಿಡಿತಲೆ ಹೊಂದಿದೆಯೇ ಎಂದು ನಿರ್ಧರಿಸಲು ಪಾಕ್ ಸೇನೆಗೆ ಕೇವಲ 30 ರಿಂದ 45 ಸೆಕೆಂಡ್ ಕಾಲಾವಕಾಶ ಮಾತ್ರ ಇತ್ತು. ಅದು ಕ್ಲಿಷ್ಟಕರ ಸಮಯವಾಗಿತ್ತು - ರಾಣಾ ಸನಾವುಲ್ಲಾ
‘ಐಸಿಎಂಆರ್ ಮತ್ತು ಏಮ್ಸ್ ನಡೆಸಿದ ವ್ಯಾಪಕ ಅಧ್ಯಯನಗಳು ಕೊರೊನಾ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ದೃಢೀಕರಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಎಚ್ಸಿಜಿ ಕ್ಯಾನ್ಸರ್ ಆಸ್ಪತ್ರೆಯು ಕ್ಲಿನಿಕಲ್ ಟ್ರಯಲ್ ವೇಳೆ ನಿಯಮ ಉಲ್ಲಂಘನೆ ಮಾಡಿತ್ತು ಎಂಬ ಪ್ರಕರಣದ ಬಗ್ಗೆ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ತನಿಖೆ ನಡೆಸಲಿದೆ.
ಕಳೆದೆರಡು ವರ್ಷಗಳಲ್ಲಿ ಭಾರತದ ಪ್ರತಿ ವ್ಯಕ್ತಿ ಮೇಲಿನ ಋಣ ಭಾರ 4.8 ಲಕ್ಷ ರು.ಗೇರಿದೆ. 2023ರ ಮಾರ್ಚ್ನಲ್ಲಿ ಪ್ರತಿ ವ್ಯಕ್ತಿ ಮೇಲೆ ತಲಾ 3.9ಲಕ್ಷ ರು.ನಷ್ಟು ಸಾಲವಿತ್ತು. ಮಾರ್ಚ್ 2025ರ ವೇಳೆಗೆ ಇದು ಶೇ.23ರಷ್ಟು ಹೆಚ್ಚಳ ಕಂಡಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಹೇಳಿದೆ.