ಇತ್ತೀಚೆಗಷ್ಟೇ ಅಧಿಕಾರ ಸ್ವೀಕರಿಸಿರುವ ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಸಿಎಂ ಕಚೇರಿಯಲ್ಲಿನ ಅಂಬೇಡ್ಕರ್ ಹಾಗೂ ಭಗತ್ ಸಿಂಗ್ ಫೋಟೋಗಳನ್ನು, ಕಚೇರಿಯಲ್ಲಿನ ಬೇರೆ ಗೋಡೆಗೆ ಸ್ಥಳಾಂತರಿಸಿದ್ದು ವಿವಾದಕ್ಕೀಡಾಗಿದೆ.
ಧಾರ್ಮಿಕ ಮತ್ತು ಸಾಂಪ್ರದಾಯಿಕ ಆಚರಣೆಗಳನ್ನು ವಿರೋಧಿಸುವುದು ಗುಲಾಮಗಿರಿ ಮನಸ್ಥಿತಿ ಇದಕ್ಕೆ ವಿದೇಶಗಳಿಂದ ಕುಮ್ಮಕ್ಕು ಸಿಗುತ್ತಿದೆ ಎಂದು ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ ಮಹಾಕುಂಭಮೇಳವು ‘ಏಕತೆಯ ಮಹಾಕುಂಭ’ ಆಗಿದ್ದು, ಟೀಕಾಕಾರರಿಗೆ ಇದೇ ಉತ್ತರ’ ಎಂದು ಬಣ್ಣಿಸಿದ್ದಾರೆ.
ಈ ಬಾರಿಯ ಕುಂಭಮೇಳವು ಇದೇ ಬುಧವಾರ ಕೊನೆಗೊಳ್ಳಲಿದ್ದು, ಈಗಾಗಲೇ ಕೋಟ್ಯಂತರ ಭಕ್ತರು ದೇಶ ವಿದೇಶಗಳಿಂದ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ.