ಈಗಾಗಲೇ ಕೆನಡಾ, ಮೆಕ್ಸಿಕೋದಂತಹ ದೇಶಗಳ ಮೇಲೆ ತೆರಿಗೆ ಪ್ರಹಾರ ನಡೆಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಶೀಘ್ರದಲ್ಲಿ ಭಾರತದ ಹಾಗೂ ಚೀನಾದ ಮೇಲೆಯೂ ಪ್ರತಿ ತೆರಿಗೆ ಹೇರುತ್ತೇವೆ’ ಎಂದು ಘೋಷಿಸಿದ್ದಾರೆ.
ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವ ವೇಳೆ ಕೇಂದ್ರ ಕೃಷಿ ಸಚಿವ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮುರಿದ ಸೀಟನ್ನು ನೀಡಲಾದ ಘಟನೆ ನಡೆದಿದೆ. ಈ ಮುರಿದ ಆಸನದಲ್ಲೇ ಅವರು ಭೋಪಾಲ್ನಿಂದ ದಿಲ್ಲಿಗೆ 1.5 ತಾಸು ಪ್ರಯಾಣ ಮಾಡಿದ್ದಾರೆ.