ಭಾರತದಲ್ಲಿ ನೇಮಕಾತಿ ಆರಂಭಿಸಿದ ಮಸ್ಕ್ರ ಟೆಸ್ಲಾವಿಶ್ವದ ಮುಂಚೂಣಿ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿಯಾದ ಟೆಸ್ಲಾ, ಭಾರತದಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದು ಭಾರತದಲ್ಲಿ ಅದು ಶೀಘ್ರವೇ ತನ್ನ ಘಟಕ ಆರಂಭಿಸು ಸುಳಿವು ಎಂದು ಹೇಳಲಾಗಿದೆ. ಇತ್ತೀಚಿನ ಅಮೆರಿಕ ಭೇಟಿ ವೇಳೆ ಪ್ರಧಾನಿ ಮೋದಿ, ಮಸ್ಕ್ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.