ಸದ್ಯದಲ್ಲೇ ವಾರ್ಷಿಕ ಪರೀಕ್ಷೆಗೆ ಸಜ್ಜುಗೊಳ್ಳುತ್ತಿರುವ ಮಕ್ಕಳ ಜತೆಗೆ ಪ್ರಧಾನಿ ಮೋದಿ, ನಟಿ ದೀಪಿಕಾ ಪಡುಕೋಣೆ ಬಳಿಕ ಇದೀಗ ಆಧ್ಯಾತ್ಮ ಗುರು ಸದ್ಗುರು ಅವರು ನಡೆಸಿದ ಪರೀಕ್ಷಾ ಪೇ ಚರ್ಚೆ ಸಂವಾದ ಶನಿವಾರ ಪ್ರಸಾರ ಮಾಡಲಾಯಿತು.
ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಮುಂದಾಗಿರುವ ಬಿಜೆಪಿ ಆಳ್ವಿಕೆಯ ರಾಜ್ಯಗಳು ಇದೀಗ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿಗೂ ಪ್ರಯತ್ನಿಸುತ್ತಿರುವ ಬೆಳವಣಿಗೆ ಕಂಡುಬಂದಿದೆ.
ಭಾರತ ಸರ್ಕಾರ ಅಧೀನದ ಟೆಲಿಕಾಂ ಉದ್ಯಮ ಭಾರತೀಯ ಸಂಚಾರ ನಿಗಮ ಲಿಮಿಟೆಡ್ (ಬಿಎಸ್ಎನ್ಎಲ್) 17 ವರ್ಷಗಳ ಬಳಿಕ ಮೊದಲ ಬಾರಿಗೆ ಲಾಭ ಮಾಡಿದೆ. 2024-25 ಹಣಕಾಸು ವರ್ಷದ 3ನೇ ತ್ರೈಮಾಸಿಕದಲ್ಲಿ ಸಂಸ್ಥೆಯು 262 ಕೋಟಿ ರು. ಲಾಭ ಮಾಡಿದೆ.
ಕೋಟ್ಯಂತರ ರು. ಮೌಲ್ಯದ ಆಸ್ತಿ ಪತ್ರಗಳು, ಚಿನ್ನಾಭರಣ ಇತರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಆರಂಭಗೊಂಡಿದೆ.
ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದೊಂದು ವರ್ಷದಿಂದ ದೆಹಲಿ ಹೊರವಲಯದಲ್ಲಿ ಪ್ರತಿಭಟಿಸುತ್ತಿರುವ ರೈತರೊಂದಿಗಿನ ಸಂಧಾನಕ್ಕೆ ಕೇಂದ್ರ ಹಾಗೂ ಪಂಜಾಬ್ ಸರ್ಕಾರಗಳು ಮುಂದಾಗಿದ್ದು, ಅದರ ಹೊಣೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ವಹಿಸಲಾಗಿದೆ.