ಇಂಡಿ ಕೂಟಕ್ಕೆ ಮಮತಾ ಮತ್ತಷ್ಟು ಶಾಕ್ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಳಿಕ ಇಂಡಿಯಾ ಕೂಟದ ಪುನರುಜ್ಜೀವನಕ್ಕೆ ಬೇಡಿಕೆ ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ, ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಶಾಕ್ ನೀಡಿದ್ದಾರೆ. 2026ರ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಅವರು ಘೋಷಿಸಿದ್ದಾರೆ.