ಸಾರಾಂಶ
‘ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನುವ ಕಾರಣಕ್ಕೆ ಪಾಕ್ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌ರನ್ನು ಪೀಲ್ಡ್ ಮಾರ್ಷಲ್ ಹುದ್ದೆಗೆ ಪದೋನ್ನತಿ ಮಾಡಿರುವುದು ನನ್ನ ನಿರ್ಧಾರವಾಗಿದೆ’ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ
ಇಸ್ಲಾಮಾಬಾದ್: ‘ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನುವ ಕಾರಣಕ್ಕೆ ಪಾಕ್ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌ರನ್ನು ಪೀಲ್ಡ್ ಮಾರ್ಷಲ್ ಹುದ್ದೆಗೆ ಪದೋನ್ನತಿ ಮಾಡಿರುವುದು ನನ್ನ ನಿರ್ಧಾರವಾಗಿದೆ’ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ
ಮಂಗಳವಾರ ಶೆಹಬಾಜ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಜ. ಮುನೀರ್ ಅವರಿಗೆ ಬಡ್ತಿ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು, ಈ ಬಗ್ಗೆ ಪತ್ರಕರ್ತರೊಂದಿಗೆ ಮಾತನಾಡಿದ ಶೆಹಬಾಜ್, ‘ ಸೇನಾ ಮುಖ್ಯಸ್ಥರಿಗೆ ಬಡ್ತಿ ನೀಡಿರುವುದು ನನ್ನ ನಿರ್ಧಾರ.
ಇದಕ್ಕಾಗಿ ಹಿರಿಯ ಸಹೋದರ , ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ಜೊತೆಗೆ ಸಮಾಲೋಚನೆ ನಡೆಸಿದ್ದೇನೆ’ ಎಂದರು.